ಬೆಂಗಳೂರು : ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ರಾಜ್ಯದ ಎಲ್ಲಾ ನ್ಯಾಯಾಲಯದ ಆವರಣಗಳಲ್ಲಿ ಸೆಪ್ಟಂಬರ್ 9ರಂದು ರಾಷ್ಟ್ರೀಯ ಲೋಕದಲತ್ಗಲನ್ನು ಆಯೋಜಿಸಲಾಗುತ್ತಿದ್ದು ಸಾರ್ವಜನಿಕರು ತಮ್ಮ ವ್ಯಾಜ್ಯಪೂರ್ಣ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳಲ್ಲಿ ರಾಜಿ ಸಂಧಾನ ಮೂಲಕ ಶೀಘ್ರ ಪರಿಹಾರ ಕಂಡುಕೊಳ್ಳುವಂತೆ ಮಾನ್ಯ ಶ್ರೀ. ಮುರುಲೀಧರ ಪೈ, ಪ್ರಧಾನ ನಗರ ಸಿವಿಲ್ ಮತ್ತು ಸತ್ರ ನ್ಯಾಯಾಧೀಶರು, ಬೆಂಗಳೂರು ಹಾಗೂ ಅಧ್ಯಕ್ಷರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ನಗರ ಮಾಹಿತಿ ನೀಡಿದರು. ಈ ಸುದ್ದಿಗೋಷ್ಠಿಯಲ್ಲಿ ಶ್ರೀ. ವರದರಾಜ್ .ಬಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ನಗರ ಇವರು ಉಪಸ್ಥಿತರಿದ್ದರು.

ರಾಜಿ ಸಂಧಾನದ ಮೂಲಕ ರಾಜಿ ಆಗುವಂತಹ ಎಲ್ಲಾ ರೀತಿಯ ಪ್ರಕರಣಗಳನ್ನು ಹಾಗೂ ವ್ಯಾಜ್ಯಗಳ ರಾಜಿ ಸಂಧಾನ ಮೂಲಕ ಇತ್ಯರ್ಥ ಪಡಿಸಲಾಗುತ್ತಿದ್ದು, ಸಾಕ್ಷಿದಾರರು ಹಾಗೂ ಸಾರ್ವಜನಿಕರು ಇದರ ಸದುಪಯೋಗ ಪಡಿಸಬೇಕೆಂದು ಸುದ್ದಿಗೋಷ್ಠಿಯಲ್ಲಿ ಮಾಧ್ಯಮಗಳಿಗೆ ತಿಳಿಸಿದರು.
ರಾಷ್ಟ್ರೀಯ ರಾಜ್ಯ ಜಿಲ್ಲಾ ಹಾಗೂ ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರಗಳಿಂದ ಲೋಕದಲತ್ ಆಯೋಜಿಸಲಾಗಿದೆ ಇದರಲ್ಲಿ ಕ್ರಿಮಿನಲ್ ಪ್ರಕರಣಗಳು, ಸಿವಿಲ್ ಪ್ರಕರಣಗಳು, ಮೋಟರ್ ಕಾಯ್ದೆ ಪರಿಹಾರ ಪ್ರಕಾರಗಳು, ಕುಟುಂಬಿಕ ವ್ಯಾಜ್ಯ,ಹಣಕಾಸಿನ ವ್ಯಾಜ್ಯಗಳು, ಸೇರಿದಂತೆ ವಿವಿಧ ಪ್ರಕರಣಗಳು ಕಕ್ಷಿದಾರರು ವಕೀಲರ ಒಪ್ಪಿಗೆ ಮೇರೆಗೆ ರಾಜಿ ಸಂದಾನ ಮೂಲಕ ಪ್ರಕರಣಗಳನ್ನು ಶೀಘ್ರ ಇತ್ಯರ್ಥ ಪಡಿಸಲಾಗುತ್ತದೆ. ಇಲ್ಲಿ ಇತ್ಯರ್ಥ ಇತ್ಯಾದಿಪಡಿಸಲಾಗುವ ಪ್ರಕರಣಗಳನ್ನು ಸಂಪೂರ್ಣವಾಗಿ ಇತ್ಯರ್ಥಗೊಂಡು ಉಭಯ ವ್ಯಕ್ತಿಗಳಿಗೆ ನ್ಯಾಯ ನೀಡಲಾಗುವುದು.
ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಟೋಲ್ ಫ್ರೀ ಸಂಖ್ಯೆ 180042590900 ಗೆ ಸಂಪರ್ಕಿಸಬಹುದು







