HomeAnti Corruption Tvಕೊಡಗು ಜಿಲ್ಲಾ ಪೊಲೀಸ್ ವತಿಯಿಂದ ಪೊಲೀಸ್ ಧ್ವಜ ದಿನಾಚರಣೆ

ಕೊಡಗು ಜಿಲ್ಲಾ ಪೊಲೀಸ್ ವತಿಯಿಂದ ಪೊಲೀಸ್ ಧ್ವಜ ದಿನಾಚರಣೆ

- Advertisement -spot_img

ಕೊಡಗು ಜಿಲ್ಲಾ ಪೊಲೀಸ್‌ ವತಿಯಿಂದ ಪೊಲೀಸ್ ಧ್ವಜ ದಿನಾಚರಣೆ ಮತ್ತು ಪೊಲೀಸ್‌ ಕಲ್ಯಾಣ ದಿನವನ್ನು ದಿನಾಂಕ 02/04/2024 ರಂದು ಮಡಿಕೇರಿಯ ಜಿಲ್ಲಾ ಪೊಲೀಸ್‌ ಕವಾಯತು ಮೈದಾನದಲ್ಲಿ ಆಚರಿಸಲಾಯಿತು.

ಸಮಾರಂಭದಲ್ಲಿ ನಿವೃತ್ತ ಪಿ.ಐ ಶ್ರೀ ಶಿವಶಂಕರ್‌ ಇವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಪೊಲೀಸ್ ಕವಾಯತಿನಲ್ಲಿ ಗೌರವವಂದನೆಯನ್ನು ಸ್ವೀಕರಿಸಿದರು.

ಈ ಸಂದರ್ಭ ಪ್ರತಿ ವರ್ಷದಂತೆ ಜಿಲ್ಲೆಯಲ್ಲಿ ಅತ್ಯುತ್ತಮ ಕಾರ್ಯನಿರ್ವಹಿಸಿದ ಓರ್ವ ಪೊಲೀಸ್ ಸಿಬ್ಬಂದಿಗೆ ಭಾರತದ ಪ್ರಥಮ ಸೇನಾ ಮಹಾ ದಂಡನಾಯಕ ಫೀಲ್ಡ್‌ ಮಾರ್ಷಲ್‌ ಕೆ.ಎಂ.ಕಾರ್ಯಪ್ಪ ರವರ ಹೆಸರಿನಲ್ಲಿ ನೀಡಲಾಗುತ್ತಿರುವ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಟ್ರೋಫಿಯನ್ನು ಈ ಸಾಲಿನಲ್ಲಿ ಜಿಲ್ಲೆಯ ಭಾಗಮಂಡಲ ಪೊಲೀಸ್ ಠಾಣೆಯ ಹೆಡ್‌ ಕಾನ್ಸ್ ಟೇಬಲ್‌ ಶ್ರೀ ಪಿ.ಎಂ ಸುನಿಲ್‌ ಕುಮಾರ್ ರವರಿಗೆ‌ ಪ್ರದಾನ ಮಾಡಲಾಯಿತು.

ಇದೇ ಸಂದರ್ಭದಲ್ಲಿ ವಿಶೇಷ ಘಟಕಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್‌ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ನೀಡಲಾಗುವ ವಿಶೇಷ ಘಟಕಗಳ ಉತ್ತಮ ಕಾರ್ಯನಿರ್ವಹಣಾ ಪ್ರಶಸ್ತಿಯನ್ನು ಜಿಲ್ಲಾ ಸಶಸ್ತ್ರ ದಳದ ಎ.ಪಿ.ಸಿ ಶ್ರೀ ಪ್ರದೀಪ್‌ ಎಸ್. ರವರಿಗೆ ಪ್ರದಾನ ಮಾಡಲಾಯಿತು.

ಸಮಾರಂಭದಲ್ಲಿ ನಿವೃತ್ತ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳ ಕ್ಷೇಮಾಭವೃದ್ದಿ ಸಂಘದ ಪದಾಧಿಕಾರಿಗಳು ಮತ್ತು ನಿವೃತ್ತ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀ ರಾಮರಾಜನ್‌ ಕೆ., ಐಪಿಎಸ್‌, ಅಪರ ಪೊಲೀಸ್‌ ಅಧೀಕ್ಷಕರಾದ ಶ್ರೀ ಕೆ.ಎಸ್‌ ಸುಂದರ್‌ ರಾಜ್‌ ಕೆ.ಎಸ್.ಪಿ.ಎಸ್‌ ಸೇರಿದಂತೆ ಜಿಲ್ಲೆಯ ಪೊಲೀಸ್‌ ಅಧಿಕಾರಿ ಮತ್ತು ಸಿಬ್ಬಂದಿಯವರು ಪಾಲ್ಗೊಂಡಿದ್ದರು.

- Advertisement -spot_img
- Advertisement -spot_img
Stay Connected
16,985FansLike
2,458FollowersFollow
61,453SubscribersSubscribe
Must Read
- Advertisement -spot_img
Related News
- Advertisement -spot_img

LEAVE A REPLY

Please enter your comment!
Please enter your name here