ಇಂದಿರಾನಗರ ಪೊಲೀಸ್ ಠಾಣಾ ಸರಹದ್ದಿನ 12ನೇ ಮುಖ್ಯ ರಸ್ತೆಯಲ್ಲಿರುವ ಸ್ಪಾವೊಂದರಲ್ಲಿ ಯುವತಿಯರನ್ನು ಬಳಸಿಕೊಂಡು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಬಗ್ಗೆ ಮಾಹಿತಿ ಸಂಗ್ರಹಿಸಿದ ಪೊಲೀಸರು ಸದರಿ ಸ್ಪಾ ಮೇಲೆ ದಿನಾಂಕ:18-05-2024 ರಂದು ದಾಳಿ ನಡೆಸಿ, ವಿದೇಶಿ ಮತ್ತು ಹೊರ ರಾಜ್ಯಗಳ ಒಟ್ಟು 7 ಜನ ಸಂತ್ರಸ್ತ ಯುವತಿಯರನ್ನು ಸಂರಕ್ಷಿಸಿ ಅಕ್ರಮ ಚಟುವಟಿಕೆ ನಡೆಯುತ್ತಿದ್ದ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿರುತ್ತದೆ. ಈ ಸಂಬಂಧ ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿರುತ್ತಾರೆ.
ತನಿಖೆಯನ್ನು ಕೈಗೊಂಡ ಪೊಲೀಸರು ವಶಕ್ಕೆ ಪಡೆದ ವ್ಯಕ್ತಿಯನ್ನು ವಿಚಾರಿಸಲಾಗಿ, ಸ್ಪಾ ನಲ್ಲಿ ಕ್ರಾಸ್ ಮಸಾಜ್, ಬಾಡಿ ಟು ಬಾಡಿ ಮಸಾಜ್, ಹ್ಯಾಪಿ ಎಂಡಿಂಗ್ ಎಂಬಿತ್ಯಾದಿ ಹೆಸರಿನ ಮಸಾಜ್‌ಗಳನ್ನು ಮಾಡುವುದಾಗಿ ಗ್ರಾಹಕರನ್ನು ಆಕರ್ಷಿಸಿ, ಪ್ರಾಯದ ಯುವತಿಯರಿಂದ ಬಲವಂತವಾಗಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದುದ್ದಾಗಿ ತಿಳಿದು ಬಂದಿರುತ್ತದೆ. 7 ಜನ ಸಂತ್ರಸ್ತ ಯುವತಿಯರನ್ನು ಸಂರಕ್ಷಿಸಿ ಅವರ ಮಾನ್ಯ ನ್ಯಾಯಾಲಯಕ್ಕೆ ಕುಟುಂಬಸ್ಥರಿಗೆ ಒಪ್ಪಿಸಲಾಗಿರುತ್ತದೆ.ಆರೋಪಿಯನ್ನು ಹಾಜರಡಿಸಿರುತ್ತಾರೆ.ತಲೆಮರೆಸಿಕೊಂಡಿದ್ದು, ತನಿಖೆ ಮುಂದುವರೆದಿದೆ.
ಮತ್ತೊಬ್ಬ ಆರೋಪಿಯಾದ ಸ್ನಾನ ಮಾಲೀಕನುಈ ಕಾರ್ಯವನ್ನು ಪೂರ್ವ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಶ್ರೀ ಕುಲದೀಪ್ ಕುಮಾರ್ ಆರ್. ಜೈನ್, ಐ.ಪಿ.ಎಸ್ ರವರ ಮಾರ್ಗದರ್ಶನದಲ್ಲಿ ಹಲಸೂರು ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀ.ರಂಗಪ್ಪ ಟಿ. ರವರ ನೇತೃತ್ವದಲ್ಲಿ ಇಂದಿರಾನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಹಾಗೂ ಅಧಿಕಾರಿ/ಸಿಬ್ಬಂದಿಗಳ ತಂಡ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.







