HomeAnti Corruption Tvರಾಜ್ಯದ ಎಲ್ಲಾ ಶಾಲೆ-ಕಾಲೇಜುಗಳಲ್ಲಿ ನಾಳೆ ‘ರಾಷ್ಟ್ರೀಯ ಏಕತಾ ದಿನ’ ಆಚರಣೆ ಕಡ್ಡಾಯ

ರಾಜ್ಯದ ಎಲ್ಲಾ ಶಾಲೆ-ಕಾಲೇಜುಗಳಲ್ಲಿ ನಾಳೆ ‘ರಾಷ್ಟ್ರೀಯ ಏಕತಾ ದಿನ’ ಆಚರಣೆ ಕಡ್ಡಾಯ

- Advertisement -spot_img

ಸರ್ದಾರ್ ವಲ್ಲಭಭಾಯಿ ಪಟೇಲ್ ರವರ ಜನ್ಮದಿನವನ್ನು “ರಾಷ್ಟ್ರೀಯ ಏಕತಾ ದಿನವನ್ನಾಗಿ ಆಚರಿಸುವ ಬಗ್ಗೆ ಶಾಲಾ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.

ಏನಿದೆ ಆದೇಶದಲ್ಲಿ..?

ವಿಷಯ ಮತ್ತು ಉಲ್ಲೇಖಕ್ಕೆ ಸಂಬಂಧಿಸಿದಂತೆ ಪ್ರತಿ ವರ್ಷ ಸರ್ದಾರ್ ವಲ್ಲಭಭಾಯಿ ಪಟೇಲ್ ರವರ ಜನ್ಮದಿನವನ್ನು ಅಕ್ಟೋಬರ್ 31 ರಂದು “ರಾಷ್ಟ್ರೀಯ ಏಕತಾ ದಿನವನ್ನಾಗಿ’ ದೇಶದಾದ್ಯಂತ ಬಹಳ ಉತ್ಸಾಹದಿಂದ ಆಚರಿಸಲಾಗುತ್ತದೆ ದಿನಾಂಕ : 31.10.2024 ರಂದು ಶಿಕ್ಷಕರು ಶಾಲಾ ಹಂತದಲ್ಲಿ ಪ್ರಾರ್ಥನಾ ವೇಳೆಯಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ರವರು ದೇಶದ ಏಕೀಕರಣಕ್ಕಾಗಿ, ದೇಶದ ಭದ್ರತೆಗಾಗಿ ತಮ್ಮನ್ನು ತಾವು ಸಮರ್ಪಿಸಿಕೊಂಡಿರುವುದನ್ನು ಸ್ಮರಿಸುತ್ತಾ ಕೆಳಕಂಡ ಪ್ರತಿಜ್ಞೆಯನ್ನು ತೆಗೆದುಕೊಳ್ಳುವುದು ಹಾಗೂ ಪಟೇಲ್‌ರವರ ದೂರದೃಷ್ಟಿ, ದೇಶದ ಏಕತೆಯ ಭಾವನೆಗಳು ಹಾಗೂ ಮೌಲ್ಯಗಳ ಕುರಿತು ವಿದ್ಯಾರ್ಥಿಗಳಿಗೆ ಪುಬಂಧ ಬರವಣಿಗೆ, ರಸಪ್ರಶ್ನೆ ಸ್ಪರ್ಧೆಗಳನ್ನು ಹಮ್ಮಿಕೊಂಡು, ಜಾಥಾ, ಏಕತಾ ಓಟ (Run for Unity) ಮೂಲಕ ಅವರ ಸಂದೇಶವನ್ನು ದೇಶವಾಸಿಗಳಲ್ಲಿ ಹರಡುವುದು.

ರಾಷ್ಟ್ರೀಯ ಏಕತಾ ದಿವಸ್” ಪ್ರತಿಜ್ಞೆ

ರಾಷ್ಟ್ರದ ಏಕತೆ ಸಮಗ್ರತೆ ಮತ್ತು ಭದ್ರತೆಯನ್ನು ಸಂರಕ್ಷಿಸುತ್ತೇನೆ ದೇಶವಾಸಿಗಳಲ್ಲಿ ಈ ಸಂದೇಶವನ್ನು ಹರಡಲು ಶ್ರಮಿಸುತ್ತೇನೆ ಎಂದು ನಾನು ಪ್ರಾಮಾಣಿಕವಾಗಿ ಪ್ರತಿಜ್ಞೆ ಮಾಡುತ್ತೇನೆ. ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ದೂರದೃಷ್ಟಿ ನನ್ನ ದೇಶದ ಏಕತೆಗೆ ಉತ್ಸಾಹದಿಂದ ನಾನು ಈ ಪ್ರತಿಜ್ಞೆಯನ್ನು ತೆಗೆದುಕೊಳ್ಳುತ್ತೇನೆ. ನನ್ನ ದೇಶದ ಆಂತರಿಕ ಭದ್ರತೆಯನ್ನು ಖಾತ್ರಿಪಡಿಸಿಕೊಳ್ಳಲು ನನ್ನದೇ ಆದ ಕೊಡುಗೆಯನ್ನು ನೀಡಲು ನಾನು ಸಂಕಲ್ಪ ಮಾಡುತ್ತೇನೆ.

ಜಿಲ್ಲಾ ಹಂತದಲ್ಲಿ ಉಪನಿರ್ದೇಶಕರು (ಆಡಳಿತ) ರವರು ಶಾಲಾ-ಕಾಲೇಜುಗಳಲ್ಲಿ ಶಿಕ್ಷಕರು ‘ರಾಷ್ಟ್ರೀಯ ಏಕತಾ ದಿನವನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಕ್ರಮ ವಹಿಸುವುದು ಹಾಗೂ ಅನುಷ್ಠಾನಗೊಳಿಸಿದ ಬಗ್ಗೆ ಮಾಹಿತಿಯನ್ನು ರಾಜ್ಯ ಕಛೇರಿಗೆ ಇ-ಮೇಲ್ ssknasinn@gmail.comಗೆ ಸಲ್ಲಿಸುವುದು.

- Advertisement -spot_img
- Advertisement -spot_img
Stay Connected
16,985FansLike
2,458FollowersFollow
61,453SubscribersSubscribe
Must Read
- Advertisement -spot_img
Related News
- Advertisement -spot_img

LEAVE A REPLY

Please enter your comment!
Please enter your name here