HomeAnti Corruption Tvಸಂಚಾರ ಪೊಲೀಸರ ಸೋಗಿನಲ್ಲಿ ಸಾರ್ವಜನಿಕರಿಗೆ ಕರೆ ಮಾಡಿ ಸಂಚಾರ ನಿಯಮ ಉಲ್ಲಂಘನೆಯ ದಂಡದ ಮೊತ್ತ ಪಾವತಿಸುವಂತೆ...

ಸಂಚಾರ ಪೊಲೀಸರ ಸೋಗಿನಲ್ಲಿ ಸಾರ್ವಜನಿಕರಿಗೆ ಕರೆ ಮಾಡಿ ಸಂಚಾರ ನಿಯಮ ಉಲ್ಲಂಘನೆಯ ದಂಡದ ಮೊತ್ತ ಪಾವತಿಸುವಂತೆ ಬೇಡಿಕೆ ಇಟ್ಟು ವಂಚನೆ

- Advertisement -spot_img

ಸಂಚಾರಿ ಪೊಲೀಸರ ಸೋಗಿನಲ್ಲಿ ಕರೆ ಮಾಡಿ ಸಂಚಾರ ನಿಯಮ ಉಲ್ಲಂಘನೆಯ ದಂಡ ಪಾವತಿಗೆ ಬೇಡಿಕೆ ಇಡುವ ಅಪರಿಚಿತ ವ್ಯಕ್ತಿಗಳ ಬಗ್ಗೆ ಎಚ್ಚರಿಕೆ ವಹಿಸುವಂತೆ ಸಂಚಾರ ವಿಭಾಗದ ಜಂಟಿ ಪೊಲೀಸ್‌ ಆಯುಕ್ತ ಎಂ. ಎನ್‌.ಅನುಚೇತ್‌ ಮನವಿ ಮಾಡಿದ್ದಾರೆ.

ಈ ಕುರಿತು ಮಾಹಿತಿ ನೀಡಿದ ಅವರು, ಇತ್ತೀಚೆಗೆ ಸೈಬರ್‌ ವಂಚಕರು ಸಂಚಾರ ಪೊಲೀಸರ ಸೋಗಿನಲ್ಲಿ ಸಾರ್ವಜನಿಕರಿಗೆ ಕರೆ ಮಾಡಿ ಸಂಚಾರ ನಿಯಮ ಉಲ್ಲಂಘನೆಯ ದಂಡದ ಮೊತ್ತ ಪಾವತಿಸುವಂತೆ ಬೇಡಿಕೆ ಇಟ್ಟು ವಂಚನೆ ಮಾಡುತ್ತಿದ್ದಾರೆ. ಈ ಕುರಿತು ಹಲವಾರು ಪ್ರಕರಣಗಳು ದಾಖಲಾಗಿವೆ ಎಂದು ಹೇಳಿದ್ದಾರೆ.

ಸಂಚಾರಿ ಪೊಲೀಸರೆಂದು ಸಾರ್ವಜನಿಕರಿಗೆ ಕರೆ ಮಾಡುತ್ತಿರುವ ವಂಚಕರು, ದಂಡದ ನಕಲಿ ಲಿಂಕ್‌ ಕಳುಹಿಸಿ ಪಾವತಿಗೆ ಒತ್ತಾಯಿಸುವುದು, ವಿಮೆ ನೀಡುವುದಾಗಿ ವಂಚನೆ, ಅಲ್ಲದೆ, ನಿಮ್ಮ ವಾಹನ ಹಿಟ್‌ ಆ್ಯಂಡ್‌ ರನ್‌ ಆಗಿರುವ ಬಗ್ಗೆ ಬೆದರಿಸುತ್ತಾರೆ. ಈ ಮೂಲಕ ವೈಯಕ್ತಿಕ ಮಾಹಿತಿ ದೋಚಲು ಯತ್ನಿಸಿ, ಮೊಬೈಲ್‌ನಲ್ಲಿ 1 ಅಥವಾ 2 ಸಂಖ್ಯೆಯನ್ನು ಒತ್ತಲು ಹೇಳಿ ವಂಚನೆ ಮಾಡುತ್ತಿದ್ದಾರೆ. ಈ ರೀತಿಯ ಕರೆಗಳನ್ನು ‌ ಪೊಲೀಸರು ಮಾಡುವುದಿಲ್ಲ ಎಂದು ತಿಳಿಸಿದ್ದಾರೆ.

ಅನುಮಾನಾಸ್ಪದ ಲಿಂಕ್‌ಗಳ ಮೇಲೆ ಕ್ಲಿಕ್‌ ಮಾಡಬೇಡಿ ಅಥವಾ ಲಗತ್ತುಗಳನ್ನು ಡೌನ್‌ ಲೋಡ್‌ ಮಾಡಬೇಡಿ.

ವೈಯಕ್ತಿಕ ಮಾಹಿತಿ ಕೊಡಬೇಡಿ ಅಥವಾ ಹಣ ಪಾವತಿ ಮಾಡದಿರಿ.

ಸಂಚಾರಿ ಪೊಲೀಸ್‌ ಇಲಾಖೆಯನ್ನು ನೇರವಾಗಿ ಸಂಪರ್ಕಿಸುವ ಮೂಲಕ ಕರೆಗಳು ಅಥವಾ ಸಂದೇಶಗಳ ವಿಶ್ವಾಸಾರ್ಹತೆಯನ್ನು ದೃಢಪಡಿಸಿಕೊಳ್ಳಿ.

ಸಂಚಾರಿ ಪೊಲೀಸ್‌ ಇಲಾಖೆಯ ಅಧಿಕೃತ ವೆಬ್‌ಸೈಟ್‌ ಅಥವಾ ಸಹಾಯವಾಣಿ ಸಂಖ್ಯೆಗೆ (080-22868550 /22868444) ದೂರು ದಾಖಲಿಸಿ.

ಮಾಹಿತಿ ಒದಗಿಸುವ ಮೊದಲು ಅಧಿಕಾ ರಿಗಳ ಗುರುತುಗಳನ್ನು ಪರಿಶೀಲಿಸಿ. ದಂಡ ಅಥವಾ ಸೇವೆಗಳಿಗಾಗಿ, ದಂಡ ಪಾವತಿಗಾಗಿ ಅಧಿಕೃತ ವೆಬ್‌ಸೈಟ್‌ ಗಳನ್ನು ಬಳಸಿ.

ಸಾಫ್ಟ್ ವೇರ್ ಮತ್ತು ಆಪರೇಟಿಂಗ್‌ ಸಿಸ್ಟಂಗಳನ್ನು ನವೀಕೃತವಾಗಿರಿಸಿಕೊಳ್ಳಿ.

ಅನುಮಾನಾಸ್ಪದ ಚಟುವಟಿಕೆಗಳನ್ನು ಪೊಲೀಸರಿಗೆ ವರದಿ ಮಾಡುವ ಮೂಲಕ ಸುರಕ್ಷಿತ ಹಾಗೂ ಜಾಗರೂಕರಾಗಿರಿ.

- Advertisement -spot_img
- Advertisement -spot_img
Stay Connected
16,985FansLike
2,458FollowersFollow
61,453SubscribersSubscribe
Must Read
- Advertisement -spot_img
Related News
- Advertisement -spot_img

LEAVE A REPLY

Please enter your comment!
Please enter your name here