HomeAnti Corruption Tvಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಸದ್ಬಾವನಾ ದಿನಾಚರಣೆ -18.08.2022

ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಸದ್ಬಾವನಾ ದಿನಾಚರಣೆ -18.08.2022

- Advertisement -spot_img
ಕರ್ನಾಟಕ:ಕೋಲಾರ ಚಿನ್ನದ ಗಣಿ ಪ್ರದೇಶದ ಚಾಂಫೀಯನ್ರೀಫ್ಸ್ನಲ್ಲಿನ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಗುರುವಾರದಂದು ಬೆಳಿಗ್ಗೆ ಕೋಮು ಸೌಹಾರ್ದತೆಯ ಪ್ರತೀಕವಾಗಿ ಸದ್ಬಾವನಾ ದಿನಾಚರಣೆಯನ್ನು ಪ್ರತಿಜ್ಞಾವಿಧಿ ಸ್ವೀಕಾರದ ಮೂಲಕ ಆಚರಿಸಲಾಯಿತು.
ಸದ್ಬಾವನಾ ದಿನಾಚರಣೆಯ ಪ್ರತಿಜ್ಞಾ ವಿಧಿಯ ಸ್ವೀಕಾರ ಕಾರ್ಯಕ್ರಮದಲ್ಲಿ, ಜಾತಿ, ಧರ್ಮ, ಪ್ರದೇಶ, ಮತ ಅಥವಾ ಭಾಷೆಯ ಬೇದ ಭಾವವಿಲ್ಲದೇ ಭಾರತದ ಎಲ್ಲಾ ಜನತೆಯ ಭಾವೈಕ್ಯ ಮತ್ತು ಸೌಹಾರ್ದಕ್ಕಾಗಿ ಕಾರ್ಯ ನಿರ್ವಹಿಸುತ್ತೇನೆಂದು ಪ್ರತಿಜ್ಞೆ ಮಾಡಿದರು. ಅಲ್ಲದೇ ವೈಯಕ್ತಿಕವಾಗಲೀ ಅಥವಾ ಸಾಮೂಹಿಕವಾಗಲೀ ನಮ್ಮಲ್ಲಿರುವ ಎಲ್ಲಾ ಬೇದ ಭಾವಗಳನ್ನು ಹಿಂಸಾಚಾರಕ್ಕೆ ಅವಕಾಶ ನೀಡದೆ ಸಮಾಲೋಚನೆ ಹಾಗೂ ಸಂವಿಧಾನಾತ್ಮಕ ಕ್ರಮಗಳ ಮೂಲಕ ಪರಿಹರಿಸುತ್ತೇನೆಂದು ಸಹ ಪ್ರತಿಜ್ಞೆ ಮಾಡಲಾಯಿತು.
ಸಹಾಯಕ ಆಡಳಿತಾಧಿಕಾರಿ ಜಿ. ವಿಶ್ವನಾಥ, ಪೊಲೀಸ್ ನಿರೀಕ್ಷಕ ದಯಾನಂದ, ನಿಸ್ತಂತು ನಿರೀಕ್ಷಕ ನವೀನ್, ಪಿಎಸ್ಐ ನಾಗಪ್ಪ ಖಾನಾಪೂರ ಸೇರಿದಂತೆ ಜಿಲ್ಲಾ ಪೊಲೀಸ್ ಕಛೇರಿಯ ಅಧಿಕಾರಿ, ಲಿಪಿಕ ಸಿಬ್ಬಂದಿಗಳು ಹಾಜರಿದ್ದರು.
- Advertisement -spot_img
- Advertisement -spot_img
Stay Connected
16,985FansLike
2,458FollowersFollow
61,453SubscribersSubscribe
Must Read
- Advertisement -spot_img
Related News
- Advertisement -spot_img

LEAVE A REPLY

Please enter your comment!
Please enter your name here