HomeAnti Corruption Tvಪಿಎಸ್‌ಐ ವಿರುದ್ಧ ಪ್ರಕರಣ ದಾಖಲಿಸಿ ದಂಡ

ಪಿಎಸ್‌ಐ ವಿರುದ್ಧ ಪ್ರಕರಣ ದಾಖಲಿಸಿ ದಂಡ

- Advertisement -spot_img

ಪೊಲೀಸರೇ ಸಂಚಾರ ನಿಯಮ ಉಲ್ಲಂಘಿಸಿರುವ ಪ್ರಕರಣ ರಾಜಧಾನಿ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದ್ದು, ಮಹಿಳಾ ಪಿಎಸ್‌ಐ ಒಬ್ಬರ ಮೇಲೆ ದೂರು ದಾಖಲಿಸಿ ದಂಡ ವಿಧಿಸಲಾಗಿದೆ.
ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರಾಗಿ ಸಂಚರಿಸುತ್ತಿದ್ದ ಮಹಿಳಾ ಸಬ್ ಇನ್‌ಸ್ಟೆಕ್ಟರ್ ಒಬ್ಬರು ಹೆಲ್ಮೆಟ್ ಧರಿಸದೆ ಇರುವುದನ್ನು ಗಮನಿಸಿದ್ದ ವ್ಯಕ್ತಿಯೊಬ್ಬರು ಅದರ ಫೋಟೋ ಹಾಗೂ ವಿಡಿಯೋ ಸಮೇತ ಟ್ವೀಟ್ ಮಾಡಿದ್ದರು.


ಅಲ್ಲದೆ, ಸ್ವಿಗ್ಗಿ, ಜೊಮಾಟೋ, ಕೊರಿಯರ್ ಹುಡುಗರನ್ನು ಅಡ್ಡಗಟ್ಟುವ ನಗರ ಸಂಚಾರ ಪೊಲೀಸರಿಗೆ ಇವರೇಕೆ ಕಾಣುತ್ತಿಲ್ಲ ಎಂದೂ ಪ್ರಶ್ನಿಸಿದ್ದರು.
ಡಿಜಿಪಿ, ಬೆಂಗಳೂರು ಸಂಚಾರ ಪೊಲೀಸ್ ಹಾಗೂ ಕಬ್ಬನ್‌ಪಾರ್ಕ್ ಸಂಚಾರ ಪೊಲೀಸರನ್ನು ಉಲ್ಲೇಖಿಸಿದ್ದರು.

ಈ ಟ್ವೀಟ್‌ನ್ನು ಸಾವಿರಾರು ಮಂದಿ ನೋಡುತ್ತಿದ್ದಂತೆ ಎಚ್ಚೆತ್ತುಕೊಂಡ ಕಬ್ಬನ್‌ಪಾರ್ಕ್ ಸಂಚಾರ ಪೊಲೀಸರು ಸಂಬಂಧಿತ ಪಿಎಸ್‌ಐ ವಿರುದ್ಧ ಪ್ರಕರಣ ದಾಖಲಿಸಿ ದಂಡ ವಿಧಿಸಿದ್ದಾರೆ.
ಅಲ್ಲದೆ, ಸಾರ್ವಜನಿಕರು ಸಂಚಾರ ನಿಯಮ ಉಲ್ಲಂಘಿಸಿದರೆ ಪೊಲೀಸರು ಅಡ್ಡಗಟ್ಟಿ ಪ್ರಕರಣ ದಾಖಲಿಸಿ ದಂಡ ವಿಧಿಸುತ್ತಾರೆ. ಆದರೆ ಪೊಲೀಸರೇ ಸಂಚಾರ ನಿಯಮ ಉಲ್ಲಂಘಿಸಿದರೆ ಹೇಗೆ ಎಂದು ಸಾರ್ವಜನಿಕರು ಪ್ರಶ್ನೆ ಮಾಡಿ ಆಕ್ರೋಶ ಹೊರಹಾಕಿದ್ದಾರೆ.

ವರದಿ ಆಂಟೋನಿ ಬೇಗೂರು

- Advertisement -spot_img
- Advertisement -spot_img
Stay Connected
16,985FansLike
2,458FollowersFollow
61,453SubscribersSubscribe
Must Read
- Advertisement -spot_img
Related News
- Advertisement -spot_img

LEAVE A REPLY

Please enter your comment!
Please enter your name here