HomeAnti Corruption Tvವಿದ್ಯಾರ್ಥಿನಿಯರೊಂದಿಗೆ ಅನುಚಿತ ವರ್ತನೆ ತೋರಿದ ಆರೋಪದ ಮೇಲೆ ಇಬ್ಬರು ಶಿಕ್ಷಕರ ವಿರುದ್ಧ ಪೋಕ್ಸೊ ಪ್ರಕರಣ

ವಿದ್ಯಾರ್ಥಿನಿಯರೊಂದಿಗೆ ಅನುಚಿತ ವರ್ತನೆ ತೋರಿದ ಆರೋಪದ ಮೇಲೆ ಇಬ್ಬರು ಶಿಕ್ಷಕರ ವಿರುದ್ಧ ಪೋಕ್ಸೊ ಪ್ರಕರಣ

- Advertisement -spot_img

ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿನಿಯರೊಂದಿಗೆ ಅನುಚಿತ ವರ್ತನೆ ತೋರಿದ ಆರೋಪದ ಮೇಲೆ ಇಬ್ಬರು ಶಿಕ್ಷಕರ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾದ ಘಟನೆ ಯಾದಗಿರಿಯ ಗುರುಮಠಕಲ್‌ ತಾಲೂಕಿನ ಗುಂಜನೂರು ಎಂಬಲ್ಲಿ ನಡೆದಿದೆ.

ಎಂ.ಡಿ.ಆರ್.ಎಸ್‌. ಪ್ರಾಂಶುಪಾಲ ಅಕ್ಬರ್ ಅಲಿ ಅತ್ತಾರ್‌ ನೀಡಿದ ದೂರಿನಂತೆ ಶಾಲೆಯ ಸಮಾಜ ವಿಜ್ಞಾನ ಶಿಕ್ಷಕ ಶಾಂತಪ್ಪ ಮ್ಯಾಗೇರಿ ಮತ್ತು ಅತಿಥಿ ಶಿಕ್ಷಕ ಅಂಬರೀಶ್‌ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಶಾಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯರ ಜತೆಗೆ ಅಸಭ್ಯ ವರ್ತನೆ, ಭುಜದ ಮೇಲೆ ಕೈಹಾಕುವುದು, ಕೆಟ್ಟ ಶಬ್ದಗಳಿಂದ ಬಯ್ಯುವುದು ಮತ್ತು ದ್ವಂದ್ವಾರ್ಥದ ಶಬ್ದಗಳು ಮಾತನಾಡುತ್ತಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದು, ನನಗೆ ಮೇಲ್ನೋಟಕ್ಕೆ ಸತ್ಯವೆಂದು ತಿಳಿದುಬಂದಿದೆ’ ಎಂದು ಪ್ರಾಂಶುಪಾಲ ಅಕ್ಬರ್ ಅಲಿ ಅತ್ತಾರ್ ಪೊಲೀಸರಿಗೆ ನೀಡಿದ ದೂರಿನಲ್ಲಿದೆ.

 

- Advertisement -spot_img
- Advertisement -spot_img
Stay Connected
16,985FansLike
2,458FollowersFollow
61,453SubscribersSubscribe
Must Read
- Advertisement -spot_img
Related News
- Advertisement -spot_img

LEAVE A REPLY

Please enter your comment!
Please enter your name here