ಅಕ್ಟೋಬರ್ 18 ರಿಂದ 20 ರವರೆಗೆ ತುಮಕೂರು ಜಿಲ್ಲೆಗೆ ಉಪ ಲೋಕಾಯುಕ್ತರಾದ ನ್ಯಾಯಮೂರ್ತಿ ಬಿ. ವೀರಪ್ಪನವರ ಆಗಮನ. ಗೌರವಾನ್ವಿತ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಅಕ್ಟೋಬರ್ 18, 19 ಹಾಗೂ 20ರಂದು 3 ದಿನಗಳ ಕಾಲ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.
ತುಮಕೂರು:ಉಪ ಲೋಕಾಯುಕ್ತರು ನಗರದ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಅಕ್ಟೋಬರ್ 18ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ಹಾಗೂ ಮಧ್ಯಾಹ್ನ 2.30 ರಿಂದ ಸಂಜೆ 5 ಗಂಟೆಯವರೆಗೆ ಸಾರ್ವಜನಿಕ ಕುಂದು ಕೊರತೆಗಳ ವಿಚಾರಣೆ/ ದೂರು ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ ಹಾಗೂ ನಂತರ 5.30 ರಿಂದ 6.30 ಗಂಟೆಯವರೆಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಲೋಕಾಯುಕ್ತ ಕಾಯ್ದೆಗೆ ಸಂಬAಧಿಸಿದAತೆ ಏರ್ಪಡಿಸಿರುವ ಕಾನೂನು ಸಾಕ್ಷರತಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
Stay Connected
Must Read






