HomeAnti Corruption Tvಮಕ್ಕಳನ್ನು ಮಾರಾಟ ಮಾಡಿದ್ರೆ ಎಚ್ಚರ : 5 ವರ್ಷ ಜೈಲು ಶಿಕ್ಷೆ ಜೊತೆ 1 ಲಕ್ಷ...

ಮಕ್ಕಳನ್ನು ಮಾರಾಟ ಮಾಡಿದ್ರೆ ಎಚ್ಚರ : 5 ವರ್ಷ ಜೈಲು ಶಿಕ್ಷೆ ಜೊತೆ 1 ಲಕ್ಷ ರೂ. ದಂಡ

- Advertisement -spot_img

ಪೋಷಕರೇ ಎಚ್ಚರ, ಅನಧಿಕೃತವಾಗಿ ದತ್ತು ನೀಡುವುದು ಹಾಗೂ ಪಡೆಯುವುದು ಶಿಕ್ಷಾರ್ಹ ಅಪರಾಧವಾಗಿದ್ದು, 5 ವರ್ಷಗಳ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂ.ವರೆಗೆ ದಂಡ ವಿಧಿಸಬಹುದು.

ಹೌದು, ಬಾಲನ್ಯಾಯ ಕಾಯ್ದೆ 2015 ಸೆಕ್ಷನ್ 80 ಹಾಗೂ 81 ರನ್ವಯ ಯಾವುದೇ ವ್ಯಕ್ತಿಯಾಗಲಿ ಅಥವಾ ಸಂಸ್ಥೆಯಾಗಲಿ ಯಾವುದೇ ಅನಾಥ/ ಪರಿತ್ಯಜಿಸಲ್ಪಟ್ಟ ಮಗುವನ್ನು ದತ್ತು ನೀಡುವುದು ಅಥವಾ ಪಡೆಯುವುದು ಕಂಡುಬಂದಲ್ಲಿ ಅಂತಹ ವ್ಯಕ್ತಿ ಅಥವಾ ಸಂಸ್ಥೆಗೆ 5 ವರ್ಷಗಳವರೆಗೆ ಕಾರಗೃಹ ಶಿಕ್ಷೆ ಮತ್ತು 1 ಲಕ್ಷ ರೂಪಾಯಿ ದಂಡ ವಿಧಿಸಬಹುದು. ಈ ಅಪರಾಧದಲ್ಲಿ ಆಸ್ಪತ್ರೆಯ ಸಿಬ್ಬಂದಿಗಳು ಶಾಮೀಲಾದರೆ ಶಿಕ್ಷೆಯ ಅವಧಿ 3 ವರ್ಷಗಳಿಗೆ ಕಡಿಮೆ ಇಲ್ಲದಂತೆ 7 ವರ್ಷಗಳವರೆಗೆ ವಿಸ್ತರಿಸಬಹುದಾಗಿದೆ.

ಸಾರ್ವಜನಿಕರ ಗಮನಕ್ಕೆ: ಅನಾಥ, ಪರಿತ್ಯಕ್ತ ಮತ್ತು ಒಪ್ಪಿಸಲ್ಪಟ್ಟ ಮಕ್ಕಳ ಮಾಹಿತಿಯು ಕಂಡುಬಂದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕೊಡಗು ಜಿಲ್ಲೆ, ಮಡಿಕೇರಿ ದೂ.ಸಂ. 08272-228800 ನ್ನು ಸಂಪರ್ಕಿಸುವಂತೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಈರಸ್ವಾಮಿ ಅವರು ತಿಳಿಸಿದ್ದಾರೆ.

- Advertisement -spot_img
- Advertisement -spot_img
Stay Connected
16,985FansLike
2,458FollowersFollow
61,453SubscribersSubscribe
Must Read
- Advertisement -spot_img
Related News
- Advertisement -spot_img

LEAVE A REPLY

Please enter your comment!
Please enter your name here