HomeUncategorizedಡಿಸೆಂಬರ್ 31 ಮತ್ತು ಜನವರಿ 1ರಂದು ಬಂಡೀಪುರದ ಅರಣ್ಯ ಪ್ರವೇಶ ಇಲ್ಲಾ

ಡಿಸೆಂಬರ್ 31 ಮತ್ತು ಜನವರಿ 1ರಂದು ಬಂಡೀಪುರದ ಅರಣ್ಯ ಪ್ರವೇಶ ಇಲ್ಲಾ

- Advertisement -spot_img

ಚಾಮರಾಜನಗರ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ಬಂಡೀಪುರಕ್ಕೆ ಹೊಸ ವರ್ಷದ ಮುನ್ನಾ ದಿನ ಹಾಗೂ ಹೊಸ ವರ್ಷದಂದು ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.

ವರ್ಷಾಂತ್ಯದ ಹಿನ್ನಲೆಯಲ್ಲಿ ಪ್ರಸಿದ್ಧ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ಬಂಡೀಪುರದಲ್ಲಿ ಪ್ರವಾಸಿಗರ ದಂಡೇ ನೆರೆದು, ಮೋಜು-ಮಸ್ತಿ ಮಾಡುವ ಕಾರಣ, ವನ್ಯಜೀವಿಗಳ ಸಹಜ ಜೀವನಕ್ಕೆ ಧಕ್ಕೆಯಾಗಲಿದೆ ಎಂಬುದಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಡಿಸೆಂಬರ್ 31 ಮತ್ತು ಜನವರಿ 1ರಂದು ಬಂಡೀಪುರದ ಅರಣ್ಯ ಇಲಾಖೆಯ ವಸತಿ ಗೃಹಗಳು ಲಭ್ಯವಿರುವುದಿಲ್ಲ. ಹೀಗಾಗಿ ಅರಣ್ಯ ಇಲಾಖೆಗೆ ಸೇರಿದ ವಸತಿಗೃಹಗಳು, ಕಾಟೇಜ್ ಗಳಲ್ಲಿ ಪ್ರತ್ಯೇಕವಾಗಿ ಈ ಎರಡು ದಿನ ವಾಸ್ತವ್ಯಕ್ಕೆ ಅವಕಾಶವಿರುವುದಿಲ್ಲ.

ಅಂದಹಾಗೇ ಪ್ರತಿ ವರ್ಷವೂ ವನ್ಯ ಜೀವಿಗಳ ಸಹಜ ಜೀವನಕ್ಕೆ ತೊಂದರೆ ಆಗುವ ಕಾರಣಕ್ಕೆ ನಿರ್ಬಂಧ ಹೇರಲಾಗುತ್ತಿದೆ. ಅದರಂತೆ ಈ ಬಾರಿಯೂ ಹೊಸ ವರ್ಷಾಚರಣೆಯಂದು ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಅರಣ್ಯ ಇಲಾಖೆ ಆದೇಶಿಸಿದೆ.

- Advertisement -spot_img
- Advertisement -spot_img
Stay Connected
16,985FansLike
2,458FollowersFollow
61,453SubscribersSubscribe
Must Read
- Advertisement -spot_img
Related News
- Advertisement -spot_img

LEAVE A REPLY

Please enter your comment!
Please enter your name here