HomeAnti Corruption Tvಶಾಲೆಯಲ್ಲಿ ಗಂಡು ಮಗುವಿಗೆ ಜನ್ಮವಿತ್ತ ಒಂಬತ್ತನೇ ತರಗತಿ ಬಾಲಕಿ..!

ಶಾಲೆಯಲ್ಲಿ ಗಂಡು ಮಗುವಿಗೆ ಜನ್ಮವಿತ್ತ ಒಂಬತ್ತನೇ ತರಗತಿ ಬಾಲಕಿ..!

- Advertisement -spot_img

ಶಹಾಪುರ : ನಗರದ ಡಾ. ಬಿ ಆರ್ ಅಂಬೇಡ್ಕರ್ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ 9ನೇ ತರಗತಿಯ ವಿದ್ಯಾರ್ಥಿನಿಯೊಬ್ಬರು ವಸತಿ ಶಾಲೆಯ ಶೌಚಾಲಯದಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

ವಸತಿ ಶಾಲೆಯ ಶೌಚಾಲಯದಲ್ಲಿ ಬುಧವಾರ ಮಧ್ಯಾಹ್ನ 2:30ರ ಸುಮಾರಿಗೆ ಬಾಲಕಿಗೆ ಹೆರಿಗೆಯಾಗಿದೆ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ ಸಂಬಂಧಿಸಿದ ಅಧಿಕಾರಿಗಳು ಈ ಬಗ್ಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಗಮನಕ್ಕೂ ತರಲಿಲ್ಲ ಬೇರೆ ಮೂಲಗಳಿಂದ ಗಮನಕ್ಕೆ ಬಂದಿದ್ದು ಕ್ರಮಕ್ಕೆ ಮುಂದಾಗಿದ್ದೇವೆ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ್ ಕೋಸಂಬೆ ತಿಳಿಸಿದರು.

ಬಾಲಕಿ ಮತ್ತು ಮಗು ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಆರೋಗ್ಯವಾಗಿದ್ದಾರೆ. ಈ ಘಟನೆ ಕುರಿತು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಯಂ ಪ್ರೇರಿತ ಪ್ರಕರಣ ದಾಖಲು ಮಾಡಿಕೊಳ್ಳಲು ನಿರ್ಧರಿಸಿದೆ. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗೆ ದೂರವಾಣಿ ಮೂಲಕ ಮಾತನಾಡಿ ಘಟನೆ ಕುರಿತು ಪ್ರಕರಣ ದಾಖಲು ಮಾಡುವಂತೆ ಸೂಚಿಸಲಾಗಿದೆ. ಸ್ಥಳಕ್ಕೆ ಭೇಟಿ ನೀಡಿ ವಿಸ್ತೃತ ವರದಿಯನ್ನು ಆಯೋಗಕ್ಕೆ ಸಲ್ಲಿಸುವಂತೆ ತಿಳಿಸಲಾಗಿದೆ.

ಇನ್ನು ಮಗುವಿಗೆ ಜನ್ಮ ನೀಡಿದ ಸಂಗತಿ ಹೊರಬೀಳುತ್ತಿದ್ದಂತೆ ಅಧಿಕಾರಿಗಳ ತಂಡ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.

ವರದಿ:- ಸಿದ್ದು ಪಟ್ಟೇದಾರ್

- Advertisement -spot_img
- Advertisement -spot_img
Stay Connected
16,985FansLike
2,458FollowersFollow
61,453SubscribersSubscribe
Must Read
- Advertisement -spot_img
Related News
- Advertisement -spot_img

LEAVE A REPLY

Please enter your comment!
Please enter your name here